ಹಾಕತ್ತೂರು ಪಂಚಾಯ್ತಿ ವ್ಯಾಪ್ತಿಯ ಬಿಳಿಗೇರಿಯ ಪತಿ – ಪತ್ನಿಗೆ ಗೆಲುವು

December 30, 2020

ಮಡಿಕೇರಿ: ಹಾಕತ್ತೂರು ಪಂಚಾಯ್ತಿ ವ್ಯಾಪ್ತಿಯ ಬಿಳಿಗೇರಿ 2ರಿಂದ ಸ್ಪರ್ಧಿಸಿದ್ದ ಪತಿ-ಪತ್ನಿ ಗೆಲುವು ದಾಖಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಬ್ದುಲ್ ಖಾದರ್, ಬಿಜೆಪಿ ಬೆಂಬಲಿತ ದರ್ಶನ ಅವರನ್ನು ಪರಾಭವಗೊಳಿಸಿದ್ದಾರೆ. ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಾಕೀರ 220 ಮತ ಪಡೆದು, ಎದುರಾಳಿ ಜಯಂತಿ ಅವರನ್ನು ಸೋಲಿಸಿದ್ದಾರೆ. ಪತಿ‌ ಅಬ್ದುಲ್ ಖಾದರ್ 2ನೇ ಬಾರಿ ಗೆಲುವು ಪಡೆದರೆ, ಪತ್ನಿ ಸಾಕೀರ ಮೊದಲ ಬಾರಿ ಜಯಶಾಲಿಯಾಗಿದ್ದಾರೆ.

error: Content is protected !!