ಕೊಡಗಿನಲ್ಲಿ ಕೋವಿಡ್ : 89 ಸಕ್ರಿಯ ಪ್ರಕರಣ

December 31, 2020

ಮಡಿಕೇರಿ ಡಿ.31 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
15 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5768 ಆಗಿದ್ದು, 5601 ಮಂದಿ ಗುಣಮುಖರಾಗಿದ್ದಾರೆ. 89
ಸಕ್ರಿಯ ಪ್ರಕರಣಗಳಿದ್ದು, 78 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 55 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!