ದೇಶದಲ್ಲಿ ರೂಪಾಂತರಿ ಕೊರೋನಾ ಭೀತಿ

December 31, 2020

ನವದೆಹಲಿ ಡಿ.31 : ದೇಶಾದ್ಯಂತ ಬ್ರಿಟನ್ ನ ರೂಪಾಂತರಿ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಈ ನೆರಳಿನಲ್ಲೇ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಅತ್ಯಂತ ಜಾಗರೂಕರಾಗಿರುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದು ಸೂಚನೆ ನೀಡಿದೆ.
ಹೊಸದಾಗಿ ಪತ್ತೆಯಾಗಿರುವ ವೈರಾಣುವನ್ನು ಕೋವಿಡ್-19 ಸೂಪರ್ ಸ್ಪ್ರೆಡರ್ (ವೇಗವಾಗಿ ಹರಡುವ ವೈರಸ್) ಎಂದೇ ಹೇಳಲಾಗುತ್ತಿದ್ದು, ಚಳಿಗಾಲದಲ್ಲಿ ಇದರ ಹರಡುವಿಕೆಯ ತೀವ್ರತೆಯನ್ನು ಕಡಿಮೆ ಮಾಡುವುದಕ್ಕೆ ಜನಸಂದಣಿಯನ್ನು ನಿಗ್ರಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸ್ಪಷ್ಟವಾಗಿ ತಿಳಿಸಿದೆ.
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೂ ಪತ್ರ ಬರೆದಿದ್ದು, ಕಳೆದ ಮೂರು ವರೆ ತಿಂಗಳಲ್ಲಿ ದೇಶಾದ್ಯಂತ ಸಕ್ರಿಯ ಕೋವಿಡ್-19 ಪ್ರಕರಣಗಳು ಇಳಿಮುಖವಾಗುತ್ತಿವೆ ಎಂದೂ ಹೇಳಿದ್ದಾರೆ.
ಆದರೆ ಯುರೋಪ್ ಹಾಗೂ ಅಮೆರಿಕದಲ್ಲಿ ಹೊಸ ಮಾದರಿಯ ವೈರಾಣುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಮ್ಮಲ್ಲಿ ಸಮಗ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜೇಶ್ ಭೂಷಣ್ ಒತ್ತಾಯಿಸಿದ್ದಾರೆ.

error: Content is protected !!