ಪಿ.ರವಿಕುಮಾರ್ ನೂತನ ಮುಖ್ಯ ಕಾರ್ಯದರ್ಶಿ

December 31, 2020

ಬೆಂಗಳೂರು ಡಿ.31 : ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ವಿಜಯ್ ಭಾಸ್ಕರ್ ಅವರು ಡಿಸೆಂಬರ್ 31ಕ್ಕೆ ನಿವೃತ್ತಿ ಹೊಂದುತ್ತಿದ್ದು, ಅವರ ಸ್ಥಾನಕ್ಕೆ 1984ನೇ ಬ್ಯಾಚ್ ಐಎಎಸ್ ಅಧಿಕಾರಿ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರವಿಕುಮಾರ್ ಅವರು ಕರ್ನಾಟಕ ಕೇಡರ್ ನ ಎರಡನೇ ಅತಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
ಸೇವಾ ಹಿರಿತನದ ಜೊತೆಗೆ ಆಡಳಿತಾಧಿಕಾರಿಯಾಗಿ ಉತ್ತಮ ಗೌರವ, ಸ್ಥಾನಮಾನ, ವಿಶ್ವಾಸಗಳಿಸಿಕೊಂಡಿರುವ ರವಿ ಕುಮಾರ್ ಅವರು, ಕೊರೋನಾ ಲಾಕ್ ಡೌನ್ ನಂತರ ರಾಜ್ಯದ ಹಣಕಾಸು ಸ್ಥಿತಿಗತಿ ಹದಗೆಟ್ಟಿರುವ ಸವಾಲಿನ ಸಮಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳುತ್ತಿದ್ದಾರೆ.

error: Content is protected !!