ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪ ಗೆ ಪ.ಗೋ ಪ್ರಶಸ್ತಿ ಪ್ರದಾನ

ಮಡಿಕೇರಿ ಡಿ. 31 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2019ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನು ಕೊಡಗಿನ ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಮಂಗಳೂರಿನ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಪಡು ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪ ಅವರ 2019 ಜುಲೈ 24 ರಂದು ಕಾವೇರಿ ಟೈಮ್ಸ್ ದಿನಪತ್ರಿಕೆಯಲ್ಲಿ ಪ್ರಕಟವಾದ “ಬದುಕಿಗಾಗಿ ಅಡುಗೆ ಉತ್ಪನ್ನಗಳ ತಯಾರಿಕೆಯಲ್ಲಿ ಮಗ್ನರಾಗಿರುವ ಕಾಲೂರಿನ ಸಂತ್ರಸ್ತ ಮಹಿಳೆಯರು” ಎಂಬ ವರದಿ ಹಾಗೂ ಪತ್ರಕರ್ತರಾದ ವಿಜಯ ಕೋಟ್ಯಾನ್ ಪಡು ಅವರ 2019ರ ನವೆಂಬರ್ 25 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಕೊನೆಗೂ ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ” ವರದಿಗೆ ಪ.ಗೋ. ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ತಲಾ ಐದು ಸಾವಿರ ನಗದು ಹಾಗೂ ನೆನಪಿನ ಕಾಣಿಕೆಯನ್ನು ಹೊಂದಿದ್ದು, 20 ವರ್ಷಗಳ ನಂತರ ಕೊಡಗು ಜಿಲ್ಲೆಗೆ ಈ ಪ್ರಶಸ್ತಿ ಲಭಿಸಿದೆ. ಕರಾವಳಿ ಭಾಗದ ಆರು ಜಿಲ್ಲೆಗಳನ್ನು ಒಳಗೊಂಡ ವರದಿಗಳನ್ನು ಪ್ರಶಸ್ತಿಗಾಗಿ ಪರಿಶೀಲಿಸಲಾಗಿತ್ತು.
ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪೆÇ್ರ. ತುಕಾರಾಂ ಪೂಜಾರಿ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಸಿಸ್ಟೆಂಟ್ ಪೆÇ್ರ. ಡಾ.ಜಯಶ್ರೀ ಬಿ.ಕದ್ರಿ ಮತ್ತು ಟೈಮ್ಸ್ ಇಂಡಿಯಾ ಪತ್ರಿಕೆಯ ನಿವೃತ್ತ ಎಜಿಎಂ ಕದ್ರಿ ನವನೀತ ಶೆಟ್ಟಿ ನೇತೃತ್ವದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಪೆÇಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಡಿಸಿಪಿ ವಿನಯ.ಎ ಗಾಂವಕರ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಉಪಸ್ಥಿತರಿದ್ದರು.



