ಕೊಡಗಿನಲ್ಲಿ ಕೋವಿಡ್ : 89 ಪ್ರಕರಣಗಳು ಸಕ್ರಿಯ

December 31, 2020

ಮಡಿಕೇರಿ ಡಿ.31 : ಜಿಲ್ಲೆಯಲ್ಲಿ ಗುರುವಾರ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆÉ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5768 ಆಗಿದ್ದು, 5601 ಮಂದಿ ಗುಣಮುಖರಾಗಿದ್ದಾರೆ. 89 ಸಕ್ರಿಯ ಪ್ರಕರಣಗಳಿದ್ದು, 78 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 55 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
15 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 6 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣ ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!