Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:45 PM Tuesday 26-October 2021

ಮೇ 4 ರಿಂದ ಪರೀಕ್ಷೆಗಳು ಆರಂಭ

01/01/2021

ನವದೆಹಲಿ ಜ. 1 : ಸಿಬಿಎಸ್‍ಇ ಬೋರ್ಡ್‍ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿಲಿದ್ದು, ಜೂ.10ರ ವರೆಗೂ ನಡೆಯಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೆÇೀಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಗುರುವಾರ ಮಾತನಾಡಿದ ಅವರು, ಜೂನ್ 10ರ ವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳ ಫಲಿತಾಂಶ ಜುಲೈ 15ರಂದು ಪ್ರಕಟವಾಗಲಿದೆ. ಶಾಲೆಗಳು ಹತ್ತು ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಯೋಗ, ಪ್ರಾಜೆಕ್ಟ್ ಹಾಗೂ ಇಂಟರ್‍ನಲ್ ಅಸೆಸ್ಮೆಂಟ್‍ಗಳನ್ನು ಮಾರ್ಚ್ 1ರಿಂದ ನಡೆಸಬಹುದಾಗಿದೆ. ಇದಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಸಿಬಿಎಸ್‍ಇ ಶೀಘ್ರದಲ್ಲಿಯೇ ಹೊರಡಿಸಲಿದೆ ಎಂದು ಹೇಳಿದರು.
ದೇಶದಲ್ಲಿ ಕೊರೊನಾ ವೈರಸ್ ಸ್ಫೋಟವಾದ ಹಿನ್ನೆಲೆಯಲ್ಲಿ, ಶಿಕ್ಷಣ ಸಚಿವಾಲಯ ಈ ಹಿಂದೆ ಸಿಬಿಎಸ್ ಇ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿತ್ತು. ಸಾಮಾನ್ಯವಾಗಿ ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತವೆ ಮತ್ತು ಪ್ರತಿ ವರ್ಷ ಫೆಬ್ರವರಿತಿಂಗಳಲ್ಲಿ ಸಿದ್ಧಾಂತ ಪರೀಕ್ಷೆಗಳು ಆರಂಭವಾಗಿ ಮಾರ್ಚ್ ನಲ್ಲಿ ಮುಕ್ತಾಯವಾಗುತ್ತವೆ.
ಸಿಬಿಎಸ್ ಇ 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ ನಡೆಸಲಾಗುತ್ತದೆ. ದೇಶದಲ್ಲಿ ಕೋವಿಡ್-19 ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪಠ್ಯಕ್ರಮವನ್ನ ಸಹ ಕಡಿಮೆ ಮಾಡಲಾಗಿದೆ. ವೈರಸ್ ಹರಡುವಿಕೆಯನ್ನ ಕಡಿಮೆ ಮಾಡಲು ಮಾರ್ಚ್ ನಿಂದ ಭಾರತದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ.