ಕೋವಿಡ್ ಲಸಿಕೆ ನೀಡುವ ಪೂರ್ವಾಭ್ಯಾಸ

01/01/2021

ನವದೆಹಲಿ ಜ. 1 : ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಜ.2 ರಂದು ಕೋವಿಡ್-19 ಲಸಿಕೆ ನೀಡುವ ಪೂರ್ವಾಭ್ಯಾಸ ನಡೆಯಲಿದೆ.
ಈ ಕರಿತು ಇಂದು ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದಕ್ಕೂ ಮುನ್ನ ಆಂಧ್ರಪ್ರದೇಶ, ಗುಜರಾತ್, ಪಂಜಾಬ್ ಮತ್ತು ಅಸ್ಸಾಂಗಳಲ್ಲಿ ಲಸಿಕೆ ವಿತರಣೆ ವ್ಯವಸ್ಥೆಯ ಸಿದ್ಧತೆಯನ್ನು ಮೌಲ್ಯಮಾಪನ ಮಾಡಲು ನಡೆಸಲಾಗಿದ್ದ ಎರಡು ದಿನಗಳ ಪೂರ್ವಾಭ್ಯಾಸ ಯಶಸ್ವಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತಮ್ಮ ರಾಜಧಾನಿಯನ್ನು ಹೊರತುಪಡಿಸಿ ಪ್ರಮುಖ ನಗರಗಳಲ್ಲಿ ಕೋವಿಡ್-19 ಲಿಸಿಕೆ ನೀಡುವ ತಾಲೀಮು ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಲಸಿಕೆ ನೀಡುವ ಕುರಿತು ಹಲವಾರು ರಾಜ್ಯಗಳು ಸೂಕ್ತ ಕಾರ್ಯ ಯೋಜನೆಯನ್ನು ರೂಪಿಸಿವೆ. ಸೋಂಕು ನಿಯಂತ್ರಣ ಪ್ರದೇಶದಿಂದ ನೀಡುತ್ತಿರುವ ಲಸಿಕೆಯನ್ನು ಅತ್ಯಂತ ವ್ಯವಸ್ಥಿತಗೊಳಿಸಲು ಆರೋಗ್ಯ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.