ಕೊಡಗು ಪೊಲೀಸ್ ಇಲಾಖೆಯಿಂದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ
January 1, 2021

ಮಡಿಕೇರಿ ಜ. 1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಎ.ಎಸ್.ಐ ನಿಂಗಪ್ಪ ಮತ್ತು ಎಎಸ್ಐ ವಸಂತಕುಮಾರ್ ಅವರಿಗೆ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

