ಮೂರ್ನಾಡು ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

01/01/2021

ಮಡಿಕೇರಿ ಜ.1 : ಮೂರ್ನಾಡು ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ಗಜೇಂದ್ರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಮೂರ್ನಾಡಿನ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರಕ್ಕೆ ಧರ್ಮ ಗುರು ಸುಲೈಮಾನ್ ಸಖಾಫಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ದಾನಿಗಳಿಂದಲೇ ಪಡೆಯಬೇಕಾದ ಅನಿವಾರ್ಯತೆ ಇರುವುದರಿಂದ ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಜೀವದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.
ಶಿಕ್ಷಕ ಮುನೀರ್ ಮಾಸ್ಟರ್, ಮೂರ್ನಾಡು ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗಳು, ಸಂಘದ ಕಾರ್ಯಕರ್ತರು ಹಾಗೂ ರಕ್ತದಾನಿಗಳು ಹಾಜರಿದ್ದರು. ಶಿಬಿರದಲ್ಲಿ 30ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.