ಮಡಿಕೇರಿ ನಗರಸಭೆಗೆ ಶೀಘ್ರ ಚುನಾವಣೆ : ಬಿಜೆಪಿ ಒತ್ತಾಯ

January 1, 2021

ಮಡಿಕೇರಿ ಜ.1 : ಕಳೆದ ಎರಡು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದ ಮಡಿಕೇರಿ ನಗರಸಭೆಗೆ ಶೀಘ್ರ ಚುನಾವಣೆ ನಡೆಸಬೇಕೆಂದು ಮಡಿಕೇರಿ ನಗರ ಬಿಜೆಪಿ ಒತ್ತಾಯಿಸಿದೆ.
ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಅವರ ನೇತೃತ್ವದಲ್ಲಿ ಶುಕ್ರವಾರ ಶಾಸಕ ಎಂಪಿ.ಅಪ್ಪಚ್ಚುರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಪಕ್ಷದ ಪ್ರಮುಖರು, ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ನಗರದ ಜನರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಒತ್ತಡ ಹೇರಬೇಕೆಂದು ತಿಳಿಸಿದರು.
ಜಿಲ್ಲಾ ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಸತೀಶ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಪೂವಯ್ಯ, ನಗರಾಧ್ಯಕ್ಷೆ ಸವಿತಾ ರಾಕೇಶ್, ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಅಪ್ಪಣ್ಣ, ಉಮೇಶ್ ಸುಬ್ರಮಣಿ, ನಗರ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಪ್ರಮುಖರಾದ ರಾಕೇಶ್, ಕೆ.ಟಿ.ಪ್ರಶಾಂತ್, ಶ್ವೇತಾ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

error: Content is protected !!