ಕುಶಾಲನರದಲ್ಲಿ ಕಾವೇರಿ ನದಿಗೆ 114ನೇ ಮಹಾ ಆರತಿ

January 1, 2021

ಕುಶಾಲನಗರ ಜ. 1 : ನದಿ ಜಲಮೂಲಗಳ ಸಂರಕ್ಷಣೆಗೆ ಸರಕಾರ ಕಾರ್ಯಯೋಜನೆ ರೂಪಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಬಿ.ಜೋಯಪ್ಪ ಮನವಿ ಮಾಡಿದ್ದಾರೆ.
ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 114ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನದಿ ಮೂಲಸ್ವರೂಪ ರಕ್ಷಣೆಯೊಂದಿಗೆ ನದಿಗಳ ಗಡಿ ಗುರುತು ಮಾಡುವ ಮೂಲಕ ಸಂರಕ್ಷಣೆಯಾಗಬೇಕಾಗಿದೆ ಎಂದರು.
ಅರ್ಚಕರಾದ ಕೃಷ್ಣಮೂರ್ತಿ ಭಟ್ ಅಷ್ಟೋತ್ತರ, ಕಾವೇರಿ ಸ್ತೋತ್ರ ಪಠಣದ ನಂತರ ಕಾವೇರಿಗೆ ಸಾಮೂಹಿಕವಾಗಿ ಮಹಾ ಆರತಿ ಬೆಳಗಲಾಯಿತು.
ಈ ಸಂದರ್ಭ ಬಳಗದ ಪ್ರಮುಖರಾದ ವನಿತಾ ಚಂದ್ರಮೋಹನ್, ಡಿ.ಆರ್.ಸೋಮಶೇಖರ್, ಅಕ್ಷಯ್ ಮತ್ತು ಬಳಗದ ಸದಸ್ಯರು ಇದ್ದರು.

error: Content is protected !!