ಮಡಿಕೇರಿಯಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ

January 2, 2021

ಮಡಿಕೇರಿ ಜ. 1 : ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಯುಕ್ತಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಎಸ್. ದೇವಯ್ಯ ಧ್ವಜಾರೋಹಣ ನೇರವೆರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಘದ ನೂತನ ಕಚೇರಿಯನ್ನು ಮಾಜಿ ಸಚಿವರು ಹಾಗೂ ಹಿರಿಯ ಸಹಕಾರಿ ಮೇರಿಯಂಡ ಸಿ. ನಾಣಯ್ಯ ಉದ್ಘಾಟಿಸಿದರು.
ಕಚೇರಿ ಕೌಂಟರ್‍ಅನ್ನು ದಾನಿಗಳಾದ ಬೈರೇಟಿರ ಎಸ್. ಬಿದ್ದಯ್ಯ ಉದ್ಘಾಟಿಸಿದರು.
ಸೌಹಾರ್ದ ಪತ್ತಿನ ಸಹಕಾರಿ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಚೋವಂಡ ಡಿ. ಕಾಳಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

error: Content is protected !!