ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ ವಿಧಿವಶ

January 3, 2021

ಮಡಿಕೇರಿ ಜ.3 : ಕನ್ನಡ ಚಿತ್ರರಂಗದ ಮೇರುನಟ ಡಾ.ರಾಜಕುಮಾರ್ ಅವರ ಜೊತೆಯಲ್ಲಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ.
ಅವರು ಶ್ರೀನಿವಾಸ ಕಲ್ಯಾಣ, ಭಕ್ತ ಕುಂಬಾರ, ಕವಿರತ್ನ ಕಾಳಿದಾಸ ಮತ್ತು ಬಬ್ರುವಾಹನ ಸೇರಿದಂತೆ ಹಲವು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಶನಿ ಮಹದೇವಪ್ಪ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು.
ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

error: Content is protected !!