ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 102

January 4, 2021

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 5 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟ್.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5811 ಆಗಿದ್ದು, 5629 ಮಂದಿ ಗುಣಮುಖರಾಗಿದ್ದಾರೆ. 102
ಸಕ್ರಿಯ ಪ್ರಕರಣಗಳಿದ್ದು, 80 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 51 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!