ಮೇಕೇರಿ ಗ್ರಾ.ಪಂ ಸದಸ್ಯ ಎಂ.ಯು.ಹನೀಫ್ ಕಾಂಗ್ರೆಸ್ ಗೆ ರಾಜೀನಾಮೆ

January 4, 2021

ಮಡಿಕೇರಿ ಜ.4 : ಮೇಕೇರಿ ಗ್ರಾ.ಪಂ ನೂತನ ಸದಸ್ಯ, ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‍ನ ಸಕ್ರಿಯ ಕಾರ್ಯಕರ್ತ ಎಂ.ಯು.ಹನೀಫ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಈ ಬಾರಿಯ ಗ್ರಾ.ಪಂ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸಂದರ್ಭ ಪಕ್ಷದ ಮುಖಂಡರುಗಳಿಂದ ಯಾವುದೇ ಸಹಕಾರ ದೊರೆಯದೆ ಇರುವುದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಎರಡು ದಶಕಗಳಿಂದ ಸಕ್ರಿಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದು, ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. ಆದರೆ ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಯಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಹನೀಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!