ಸಂಘಟನಾ ಕಾರ್ಯದರ್ಶಿ ಬಾಳಾಡಿ ಪ್ರತಾಪ್ ಕುಮಾರ್ ಕಾಂಗ್ರೆಸ್‍ಗೆ ರಾಜೀನಾಮೆ

January 4, 2021

ಮಡಿಕೇರಿ ಜ.4 : ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಅರವತ್ತೋಕ್ಲು ಗ್ರಾಮದ ಬಾಳಾಡಿ ಪ್ರತಾಪ್ ಕುಮಾರ್ ಅವರು ಪಕ್ಷದ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಆದರೆ ಈ ಬಾರಿಯ ಗ್ರಾ.ಪಂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನಗೆ ಪಕ್ಷದ ಮುಖಂಡರುಗಳಿಂದ ಯಾವುದೇ ಸಹಕಾರ ದೊರೆತ್ತಿಲ್ಲವೆಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಮುಖಂಡರುಗಳ ಅಸಹಕಾರ ಮನೋಭಾವದಿಂದ ಬೇಸರಗೊಂಡು ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

error: Content is protected !!