ವಿರಾಜಪೇಟೆಯ ವಿವಿಧೆಡೆ ಜ.7 ರಂದು ವಿದ್ಯುತ್ ವ್ಯತ್ಯಯ

January 4, 2021

ಮಡಿಕೇರಿ ಜ. 4 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಜನವರಿ, 07 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಪೊನ್ನಂಪೇಟೆ, ವಿರಾಜಪೇಟೆ, ಶ್ರೀಮಂಗಲ, ಸಿದ್ದಾಪುರ, ಮೂರ್ನಾಡು ಹಾಗೂ ಆಲೂರು ಸಿದ್ದಾಪುರ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ.ಶೆಟ್ಟಿಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ, ಆಲೂರು ಸಿದ್ದಾಪುರ, ಮಾಲಂಬಿ, ಗೋಣಿಮರೂರು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

error: Content is protected !!