ಆಪ್ತ ಸಮಾಲೋಚನೆಗೆ ಟೆಲಿ ಕೌನ್ಸೆಲಿಂಗ್ ಪ್ರಾರಂಭ

January 4, 2021

ಮಡಿಕೇರಿ ಜ. 4 : ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ ಒಳಗಾದ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಆಪ್ತ ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗೆ ಟೆಲಿ-ಕೌನ್ಸಿಲಿಂಗ್ ಸೌಲಭ್ಯ ಪ್ರಾರಂಭವಾಗಿದೆ.
ಆಪ್ತ ಸಮಾಲೋಚನೆ ಬಯಸುವ ಕೊಡಗು ಜಿಲ್ಲೆಯಲ್ಲಿನ ಎಲ್ಲಾ ಮಕ್ಕಳು ಹಾಗೂ ಮಕ್ಕಳ ಪೋಷಕರು ಟೋಲ್ ಪ್ರೀ ಸಂಖ್ಯೆ 14499 ಸಂಖ್ಯೆಗೆ ಕರೆ ಮಾಡಿ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!