ಕುಶಾಲನಗರದಲ್ಲಿ ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

January 4, 2021

ಮಡಿಕೇರಿ ಜ.4 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆಶ್ರಯದಲ್ಲಿ 6ನೇ ವರ್ಷದ ಶ್ರದ್ಧಾಕೇಂದ್ರ ಮತ್ತು ನದಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿಯ ಸಹಯೋಗದಲ್ಲಿ ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ನಡೆದ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತಿ ಅಧ್ಯಕ್ಷ ಜಯವರ್ಧನ್ ಚಾಲನೆ ನೀಡಿದರು.
ಅಯ್ಯಪ್ಪಸ್ವಾಮಿ ದೇವಾಲಯದ ಹೊರ ಆವರಣ ಮತ್ತು ನದಿ ಸ್ನಾನಘಟ್ಟದ ಸ್ವಚ್ಚತೆ ನಡೆಯಿತು. ನದಿಯಲ್ಲಿ ಎಸೆಯಲಾಗಿದ್ದ ಬಟ್ಟೆ, ಬರೆ ತ್ಯಾಜ್ಯಗಳನ್ನು ಕಾರ್ಯಕರ್ತರು ತೆರವುಗೊಳಿಸಿದರು. ಈ ಸಂದರ್ಭ ಮಾತನಾಡಿದ ಪಂಚಾಯ್ತಿ ಅಧ್ಯಕ್ಷ ಜಯವರ್ಧನ್, ಪ್ರತಿಯೊಬ್ಬರು ಪರಿಸರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮೂಲಕ ಸ್ವಚ್ಚ ಪರಿಸರ ನಿರ್ಮಾಣಗೊಳ್ಳಲು ಸಾಧ್ಯ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕುಶಾಲನಗರ ಒಕ್ಕೂಟದ ಅಧ್ಯಕ್ಷೆ ಬುಶೀರ, ಸೇವಾಪ್ರತಿನಿಧಿ ವಿಜಯಲಕ್ಷ್ಮಿ, ಕಾವೇರಿ ನದಿ ಸ್ವಚ್ಚತಾ ಆಂದೋಲನದ ಸಂಚಾಲಕರಾದÀ ಎಂ.ಎನ್.ಚಂದ್ರಮೋಹನ್, ಡಿ.ಆರ್.ಸೋಮಶೇಖರ್, ಕೆ.ಆರ್.ಶಿವಾನಂದ ಮತ್ತು 20ಕ್ಕೂ ಅಧಿಕ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

error: Content is protected !!