ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

January 5, 2021

ಮಡಿಕೇರಿ ಜ. 5 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯೊಳಗೆ ಸ್ವಂತ ನಿವೇಶನವಿದ್ದು, ಮನೆರಹಿತ ಫಲಾನುಭವಿಗಳಿಗೆ ಪ್ರದಾನಮಂತ್ರಿ ಆವಾಸ್ ಯೋಜನೆಯಡಿ(ನಗರ) ಹೊಸದಾಗಿ ಮನೆ ನಿರ್ಮಿಸಲು ಕೇಂದ್ರ ಸರ್ಕಾರದಿಂದ ರೂ. 1.50 ಲಕ್ಷ ಸಹಾಯಧನ ನೀಡುವ ಯೋಜನೆ ಇದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳು ಜನವರಿ, 07 ರೊಳಗೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸೋಮವಾರಪೇಟೆ ಪ.ಪಂ.ಮುಖ್ಯಾಧಿಕಾರಿ ನಾಚಪ್ಪ ಅವರು ಕೋರಿದ್ದಾರೆ.

ಈಗಾಗಲೇ ಪ್ರಧಾನ ಮಂತ್ರಿ ಆವಾಸ್(ನಗರ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

error: Content is protected !!