ತುಳು ಅಕಾಡೆಮಿ ಬೇಡಿಕೆಗೆ ಸಿಎಂ ಸ್ಪಂದನೆ ಸ್ವಾಗತಾರ್ಹ : ಅಕಾಡೆಮಿ ಸದಸ್ಯ ಪಿ.ಎಂ.ರವಿ ಹರ್ಷ

January 5, 2021

ಮಡಿಕೇರಿ ಜ.5 : ತುಳು ಭಾಷೆಗೆ ರಾಜ್ಯ ಮಟ್ಟದ ಸ್ಥಾನಮಾನ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ನೀಡಿದ್ದು, ಇದು ಸ್ವಾಗತಾರ್ಹ ಕ್ರಮವೆಂದು ಅಕಾಡೆಮಿಯ ಸದಸ್ಯ ಹಾಗೂ ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ.ಕತ್ತಲ್‍ಸಾರ್ ಅವರು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿಯಾಗಿ ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಿ ಕೊಟ್ಟಿದ್ದಾರೆ. ತುಳು ಭಾಷೆಗೆ ರಾಜ್ಯ ಮಟ್ಟದ ಸ್ಥಾನಮಾನ ನೀಡಬೇಕು ಮತ್ತು ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಬೇಕೆಂದು ಕೋರಿಕೊಂಡಿದ್ದು, ಮುಖ್ಯಮಂತ್ರಿಗಳಿಂದ ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ರವಿ ಮಾಹಿತಿ ನೀಡಿದ್ದಾರೆ.
ಅಕಾಡೆಮಿ ನಿಯೋಗದ ಭೇಟಿ ಫಲಪ್ರದವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

error: Content is protected !!