ಕೊಡಗಿನಲ್ಲಿ ಕೋವಿಡ್ : 5675 ಮಂದಿ ಗುಣಮುಖ

January 6, 2021

ಮಡಿಕೇರಿ ಜ. 6 : ಜಿಲ್ಲೆಯಲ್ಲಿ ಬುಧವಾರ 10 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5825 ಆಗಿದ್ದು, 5675 ಮಂದಿ ಗುಣಮುಖರಾಗಿದ್ದಾರೆ. 70
ಸಕ್ರಿಯ ಪ್ರಕರಣಗಳಿದ್ದು, 80 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 51 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!