ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ ಜ. 6 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಜನವರಿ 12ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ತಿಳಿಸಿದ್ದಾರೆ.
ರಾಷ್ಟ್ರೀಯ ಸಮಿತಿ ಸದಸ್ಯರಾದ ಎಸ್.ಎ ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ, ರಾಜ್ಯ ಸಮಿತಿ ಸದಸ್ಯರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ ಮತ್ತು ವಿರಾಜಪೇಟೆ ತಾಲ್ಲೂಕು ಸಂಘದ ಅಧ್ಯಕ್ಷರಾದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದ್ದು, 2019 ನೇ ಸಾಲಿನ ವರದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವರದಿಯ ಮೂರು ನಕಲು ಪ್ರತಿಯೊಂದಿಗೆ ಅರ್ಜಿಯನ್ನು ಜನವರಿ 12 ರ ಒಳಗೆ ಅಧ್ಯಕ್ಷರಾದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರ ಬಳಿ ತಲುಪಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
