ಅನುಭವ ಮಂಟಪ ಪ್ರಧಾನಿ ಮೋದಿಯಿಂದಲೇ ಉದ್ಘಾಟನೆ

January 7, 2021

ಬಸವಕಲ್ಯಾಣ ಜ. 7 : ಬಸವಕಲ್ಯಾಣದ ನೂತನ ಅನುಭವ ಮಂಟಪ ನಿರ್ಮಾಣ ಬರುವ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ ಅವರಿಂದಲೇ ಉದ್ಘಾಟನೆ ನೆರವೇರಿಸುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಬೀದರ್‌ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪ ಆವರಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯ ನೆರವೇರಿಸಿ ಮಾತನಾಡಿದ ಅವರು, ನೂತನ ಅನುಭವ ಮಂಟಪಕ್ಕೆ 500 ಕೋಟಿ ಮೀಸಲಿಡಲಾಗಿದೆ. ಈಗಾಗಲೇ 100 ಕೋಟಿ ರುಪಾಯಿ ಬಿಡುಗಡೆ ಮಾಡಿದ್ದು, ವಾರದೊಳಗಾಗಿ ಇನ್ನೂ 100 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

error: Content is protected !!