ಎಸ್.ಡಿ.ಪಿ.ಐ ಪಕ್ಷದಿಂದ ಕೋವಿಡ್ ಸ್ವಯಂ ಸೇವಕರಿಗೆ ಅಭಿನಂದನೆ

January 7, 2021

ಮಡಿಕೇರಿ ಜ. 7 : ಕೋವಿಡ್ ಸೋಂಕು ಪತ್ತೆಯಾದ ಬಳಿಕ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ ವಿವಿಧ ಸಂಘ ಸಂಸ್ಥೆಗಳ ಸದಸ್ಯರನ್ನು ಅಭಿನಂದಿಸಲಾಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಕಚೇರಿಯಲ್ಲಿ ನಗರ ಸಮಿತಿ ಅಧ್ಯಕ್ಷ ಖಲೀಲ್ ಅಧ್ಯಕ್ಷತೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕೋವಿಡ್ ಮಹಾ ಮಾರಿಯ ಸಂದರ್ಭ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಮಡಿಕೇರಿ ಯೂತ್ ಕಮಿಟಿ, ಮಾಧ್ಯಮ ಸ್ಪಂದನ ತಂಡ, ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆ, ಎನ್.ಡಬ್ಲ್ಯೂ.ಎಫ್ ಹಾಗೂ ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದವರ ಶವ ಸಂಸ್ಕಾರ ಮಾಡಿದ ಪಿ.ಎಫ್.ಐ ತಂಡದ ಸದಸ್ಯರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಜಿಲ್ಲಾಧ್ಯಕ್ಷ ಮನ್ಸೂರ್ ಎಂ.ಎ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾ ರೈ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಅಡ್ಕಾರ್, ನಗರ ಸಮಿತಿ ಉಪಾಧ್ಯಕ್ಷ ಮೈಕಲ್, ಕಾರ್ಯದರ್ಶಿ ಜಂಶೀರ್, ಸಹ ಕಾರ್ಯದರ್ಶಿ ಜಲೀಲ್, ಕೋಶಾಧಿಕಾರಿ ಮೂಸಾ, ಪಿ.ಎಫ್.ಐ ಜಿಲ್ಲಾಧ್ಯಕ್ಷ ಶೌಕತ್ ಅಲಿ, ಮುಖಂಡರಾದ ಮುಸ್ತಫ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

error: Content is protected !!