ಕೊಡಗಿನಲ್ಲಿ ಕೋವಿಡ್ : ವ್ಯಾಕ್ಸಿನ್ ವಿತರಣೆಗೆ ಅಂತಿಮ ಸಿದ್ಧತೆ : ಮೊದಲ ಹಂತದಲ್ಲಿ 6,300 ಮಂದಿಗೆ ಲಸಿಕೆ

January 7, 2021

ಮಡಿಕೇರಿ ಜ.7 : ಕೊಡಗು ಜಿಲ್ಲೆಯಲ್ಲಿ ನಾಲ್ಕು ಹಂತದಲ್ಲಿ ವ್ಯಾಕ್ಸಿನ್ ವಿತರಣೆಗೆ ಜಿಲ್ಲಾಡಳಿತ ಅಂತಿಮ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಸುಮಾರು 6,300 ಮಂದಿಯನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮೊದಲ ಹಂತದಲ್ಲಿ ವ್ಯಾಕ್ಸಿನ್ ಪಡೆಯಲಿರುವ ಎಲ್ಲರ ಪಟ್ಟಿ ಸಿದ್ಧವಾಗಿದೆ. ಎರಡನೇ ಹಂತದಲ್ಲಿ ಪೊಲೀಸ್, ಗೃಹರಕ್ಷಕ ದಳ ಸೇರಿದಂತೆ ಫ್ರಂಟ್ ಲೈನ್ ಕಾರ್ಯಕರ್ತರಿಗೆ ನೀಡಲಾಗುತ್ತದೆ. ಮೂರನೇ ಹಂತದಲ್ಲಿ ಹಿರಿಯ ನಾಗರೀಕರಿಗೆ ಹಾಗೂ ನಾಲ್ಕನೇ ಹಂತದಲ್ಲಿ ಉಳಿದವರಿಗೆ ಲಸಿಕೆ ನೀಡಲು ಸಕಲ ಸಿದ್ಧತೆÉಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಮಡಿಕೇರಿ, ಕುಶಾಲನಗರ, ವಿರಾಜಪೇಟೆ ಸೇರಿದಂತೆ ಜಿಲ್ಲೆಯ ಒಟ್ಟು 243 ಕಡೆಗಳಲ್ಲಿ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

error: Content is protected !!