ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಬೊಳ್ಳದಂಡ ಈ. ನಾಚಪ್ಪ ಕಾಂಗ್ರೆಸ್‍ಗೆ ರಾಜೀನಾಮೆ

January 8, 2021

ಮಡಿಕೇರಿ ಜ. 8 : ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ, ಬೆಟ್ಟಗೇರಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾರುಗುಂದ ಬೂತ್ ಅಧ್ಯಕ್ಷ ಸ್ಥಾನಕ್ಕೆ ಬೊಳ್ಳದಂಡ ಈ. ನಾಚಪ್ಪ ರಾಜೀನಾಮೆ ನೀಡಿದ್ದಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಆದರೆ ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಯಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ನಾಚಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!