ವಿಶೇಷ ಪ್ಯಾಕೇಜ್‍ನಲ್ಲಿ ಕೊಡಗಿಗೆ ಬಂದಿರುವುದು ರೂ.100 ಕೋಟಿ ಮಾತ್ರ

January 8, 2021

ಮಡಿಕೇರಿ ಜ.8 : ಮಳೆಹಾನಿ ಹಿನ್ನೆಲೆ ಕೊಡಗು ಜಿಲ್ಲೆಗೆ ಘೋಷಣೆಯಾಗಿರುವ 546 ಕೋಟಿ ರೂ.ವಿಶೇಷ ಪ್ಯಾಕೇಜ್‍ನಲ್ಲಿ 100 ಕೋಟಿ ರೂ. ಮಾತ್ರ ಬಿಡುಗಡೆಯಾಗಿದ್ದು, ತುರ್ತಾಗಿ ಮತ್ತೆ 100 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಪರಿಸ್ಥಿತಿಯಿಂದ ಆದಾಯ ಸಂಗ್ರಹದಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪ್ಯಾಕೇಜ್ ಘೋಷಣೆಯ ಹಣ ಹಂತ ಹಂತವಾಗಿ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!