ಮತದಾರರೇ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಕಡಿವಾಣವೆಲ್ಲಿ : ಕೊಡ್ಲಿಪೇಟೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ವಿಷಾದ

08/01/2021

ಮಡಿಕೇರಿ ಜ.8 : ಚುನಾವಣೆ ವ್ಯವಸ್ಥೆಯೇ ಹದಗೆಟ್ಟಿದೆ, ಹಣವಿಲ್ಲದೆ ಎನೂ ನಡೆಯುತ್ತಿಲ್ಲ, ಮತದಾರರೇ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಕಡಿವಾಣವೆಲ್ಲಿ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.
ಕೊಡ್ಲಿಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಬೇರು ಮಟ್ಟದಲ್ಲಿ ಭದ್ರಗೊಳ್ಳಬೇಕೆಂದು ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುತ್ತದೆ, ಆದರೆ ಹಣವಿಲ್ಲದೇ ಗೆದ್ದವರು ಯಾರಿದ್ದೀರಿ ಎಂದು ಪ್ರಶ್ನಿಸಿದರು.
ಹೀಗಾದರೆ ಪ್ರಜಾಪ್ರಭುತ್ವ ಉಳಿಯುವುದು ಹೇಗೆ ಎಂದು ಪ್ರಶ್ನಿಸಿದರು. ಇಂದು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಿಂತ ಗ್ರಾಮ ಪಂಚಾಯ್ತಿ ಚುನಾವಣೆಗೆ ಪೈಪೆÇೀಟಿ ಹೆಚ್ಚಿದೆ. ಈ ಭಾರಿ ಅನುದಾನ ಹೆಚ್ಚು ಬರುತದೆ ಎಂದು ಸ್ಪರ್ಧೆ ಜಾಸ್ತಿ ಆಗಿದೆ. ರಾಷ್ಟ್ರದ ಪ್ರಧಾನಿ ನರೇಂದ್ರಮೋದಿಯವರ ಆಶಯದಂತೆ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ನೀತಿ ಜಾರಿಗೆ ಬರಬೇಕು, ಆಗ ಮಾತ್ರ ಭ್ರಷ್ಟಾಚಾರ ತಡೆಯಬಹುದು ಎಂದು ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ಫೋಟೋ :: ಸ್ವಾಮೀಜಿ