Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:12 AM Friday 22-October 2021

ಗ್ರಾಮದಲ್ಲಿ ಕಾಡಾನೆ, ಸರ್ವೇ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ : ಸೋಮವಾರಪೇಟೆ ತಾ.ಪಂ ಸಭೆಯಲ್ಲಿ ಅಸಮಾಧಾನ

08/01/2021

ಸೋಮವಾರಪೇಟೆ ಜ.8 : ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆಯವರು ಅರಣ್ಯಗಳ ಒಳಗೆ ಕೆರೆಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಮುಂದಾದರೆ ಹಾವಳಿಯನ್ನು ನಿಯಂತ್ರಿಸಬಹುದು ಎಂದು ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಹೇಳಿದರು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ತಾ.ಪಂ. ಅಧ್ಯಕ್ಷರಾದ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ತಾ.ಪಂ.ಸಭಾಂಗಣದಲ್ಲಿ ನಡೆಯಿತು.
ಮೀನುಕೊಲ್ಲಿ ಅರಣ್ಯದಲ್ಲಿ ಬ್ರಿಟಿಷರ ಕಾಲದ ಕೆರೆ ಇದ್ದು, ಇದೂವರೆಗೂ ಕನಿಷ್ಠ ಕೆರೆ ಹೂಳೆತ್ತುವ ಕಾರ್ಯಕ್ಕೂ ಇಲಾಖೆ ಮುಂದಾಗಿಲ್ಲ ಎಂದು ಆರೋಪಿಸಿದರು. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಅರಣ್ಯದಲ್ಲಿರುವ ಕೆರೆಗಳನ್ನು ದುರಸ್ತಿ ಪಡಿಸಲಾಗುವುದು ಎಂದು ಸೋಮವಾರಪೇಟೆ ಮತ್ತು ಶನಿವಾರಸಂತೆ ಆರ್.ಎಫ್.ಒ ಹೇಳಿದರು.
ಸರ್ವೇ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ದೂರಿದರು.
ಮಧ್ಯವರ್ತಿಗಳ ಮೂಲಕ ಹೋದರೆ ಮಾತ್ರ ಕೆಲಸವಾಗುತ್ತವೆ ತಹಶೀಲ್ದಾರ್‍ರವರು ಇಂತಹವರನ್ನು ಕಛೇರಿಯಿಂದ ದೂರ ಇಡಬೇಕೆಂದು ಹೇಳಿದರು. ಇಂತಹ ಆರೋಪಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದು ತಹಶೀಲ್ದಾರ್ ಗೋವಿಂದರಾಜ್ ಸಮಜಾಯಿಷಿಕೆ ನೀಡಿದರು.
ಕೆಲವು ಇಲಾಖೆಯ ಅಧಿಕಾರಿಗಳು ಅನುಪಾಲನಾ ವರದಿಯನ್ನು ನೀಡುತ್ತಿಲ್ಲ. ಮುಂದಿನ ಸಭೆ ನಡೆಯುವ ಸಂದರ್ಭ ಖಡ್ಡಾಯವಾಗಿ ಒಂದು ವಾರ ಮುಂಚಿತವಾಗಿ ಅನುಪಾಲನಾ ವರದಿಯನ್ನು ತಾಲ್ಲೂಕು ಪಂಚಾಯಿತಿ ಕಛೇರಿಗೆ ಸಲ್ಲಿಸಬೇಕೆಂದು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಸಭೆಗೆ ತಿಳಿಸಿದರು.
ಚೆಟ್ಟಳ್ಳಿಯಲ್ಲಿ ಬ್ಯಾಂಕ್, ಶುದ್ದ ಕುಡಿಯುವ ನೀರಿನ ಘಟಕ ಮತ್ತು ನ್ಯಾಯಬೆಲೆ ಅಂಗಡಿ ಸಮೀಪ ಹಂದಿಗೂಡು ಇದ್ದು ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ,ಇದನ್ನು ತೆರವುಗೊಳಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಗ್ರಾಮ ಪಂಚಾಯಿತಿ,ಪಶುವೈದ್ಯಕೀಯ ಇಲಾಖೆ,ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗದೇ ಇದ್ದಲ್ಲಿ ಇಲಾಖಾ ಕಛೇರಿ ಎದುರು ಧರಣಿ ಸತ್ಯಾಗ್ರಹ ಮಾಡುತ್ತೇನೆ ಎಂದು ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಎಚ್ಚರಿಕೆ ನೀಡಿದರು.
ಮೀನುಗಾರಿಕಾ ಇಲಾಖೆಯ ಅಧಿಕಾರಿಯೋರ್ವರು ಫಲಾನುಭವಿಗಳನ್ನು ಅವರೇ ಆಯ್ಕೆ ಮಾಡಿ ಅವರೇ ಮೀನು ಮರಿಗಳನ್ನು ವಿತರಿಸುತ್ತಾರೆ.ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.ಸಾಮಾನ್ಯ ಸಭೆ ಮತ್ತು ಪ್ರಗತಿಪರಿಶೀಲನಾ ಸಭೆಗಳಿಗೆ ನಿರಂತರ ಗೈರು ಹಾಜರಾಗುತ್ತಾರೆ ಎಂದು ಉಪಾಧ್ಯಕ್ಷರು ಸಭೆಗೆ ತಿಳಿಸಿದರು.
ಪಟ್ಟಣದಲ್ಲಿ ಬೀಡಾಡಿ ದನಗಳು ಹಾಗೂ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಪಟ್ಟಣ ಪಂಚಾಯಿತಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ.ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸಭೆಗಳಿಗೆ ಗೈರು ಹಾಜರಾಗುತ್ತಿರುವ ಕುರಿತು ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು.
ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಯ ವರದಿ ವಿಳಂಭವಾಗಿ ದೊರೆಯುತ್ತಿದೆ.ಇದರ ಬಗ್ಗೆ ಇಲಾಖೆಯವರು ಪರಿಶೀಲನೆ ಮಾಡಬೇಕೆಂದು ಸದಸ್ಯರಾದ ತಂಗಮ್ಮ ಸಭೆಗೆ ತಿಳಿಸಿದರು.
ತಾಲ್ಲೂಕಿನ ಬಸವನಹಳ್ಳಿ ಲ್ಯಾಂಪ್ ಸೊಸೈಟಿ ಹಗರಣ ಮುಚ್ಚಿಹಾಕಿರುವ ಸಂಶಯವಿದ್ದು,ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ಶಾಮೀಲಾಗಿರುವ ಶಂಕೆಇದ್ದು,ಪಾರದರ್ಶಕ ತನಿಖೆ ಆಗಬೇಕೆಂದು ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದರು.
ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಹಂಡ್ಲಿ ಪಂಚಾಯಿತಿ ವ್ಯಾಪ್ತಿಯ ಹುಲುಕೋಡು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ,ಇರುವ ಒಂದೇ ಕೊಳವೆ ಬಾವಿ ಕೆಟ್ಟು ನಿಂತಿದ್ದು,ಗ್ರಾಮದ 100 ಕ್ಕೂ ಅಧಿಕ ಕುಟುಂಬಗಳಿಗೆ ತೊಂದರೆ ಆಗಿದೆ ಎಂದು ಸದಸ್ಯ ಕುಶಾಲಪ್ಪ ಸಭೆಗೆ ತಿಳಿಸಿದರು.
ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿಜು ಚಂಗಪ್ಪ, ತಹಶೀಲ್ದಾರ್ ಗೋವಿಂದರಾಜು, ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಉಪಸ್ಥಿತರಿದ್ದರು.