ಸಾಕಮ್ಮನ ಬಂಗಲೆ ಮೈದಾನದಲ್ಲಿ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟ
January 8, 2021

ಸೊಮವಾರಪೇಟೆ ಜ.8 : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ತಾ. 9ರಂದು 34ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟ ನಡೆಯಲಿದೆ.
ಪೂರ್ವಾಹ್ನ 11 ಗಂಟೆಯಿಂದ ಇಲ್ಲಿನ ಸಾಕಮ್ಮನ ಬಂಗಲೆಯ ಮೈದಾನದಲ್ಲಿ ಕಬಡ್ಡಿ ಪಂದ್ಯಾಟ ಪ್ರಾರಂಭವಾಗಲಿದೆ. ಪಂದ್ಯಾವಳಿಯನ್ನು ಜಿ.ಪಂ. ಮಾಜಿ ಸದಸ್ಯ ಹೆಚ್.ಸಿ. ನಾಗೇಶ್, ಕುಸುಬೂರು ಎಸ್ಟೇಟ್ ವ್ಯವಸ್ಥಾಪಕ ಕುಶಾಲಪ್ಪ, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅವರುಗಳು ಉದ್ಘಾಟಿಸಲಿದ್ದಾರೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಹರಪಳ್ಳಿ ರವೀಂದ್ರ, ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್, ಪ.ಪಂ. ಉಪಾಧ್ಯಕ್ಷ ಸಂಜೀವ, ಸದಸ್ಯೆ ಶೀಲಾ ಡಿಸೋಜ, ಭಾಗವಹಿಸಿ ಬಹುಮಾನ ವಿತರಿಸಲಿದ್ದಾರೆ. ಇದರೊಂದಿಗೆ 19 ವರ್ಷದೊಳಗಿನ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟವನ್ನು ನಡೆಲಿದೆ. ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಟ್ರೋಫಿಗಳ ಅನಾಚರಣ ಮಾಡಿದರು.