ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 68

January 9, 2021

ಮಡಿಕೇರಿ ಜ.9 : ಕೊಡಗು ಜಿಲ್ಲೆಯಲ್ಲಿ ಶನಿವಾರ 13 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆಯೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನಲ್ಲಿ 5 ಕೊರೊನಾ ಸೋಂಕಿನ ಪ್ರಕರಣ ದೃಢಪಟ್ಟಿದ್ದರೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ 4 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 4 ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 5860 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5712 ಮಂದಿ ಗುಣಮುಖರಾಗಿದ್ದಾರೆ. 68 ಕಿಯಾಶೀಲ ಪ್ರಕರಣಗಳಿವೆ. ಇಲ್ಲಿಯವರೆಗೆ ಸೋಂಕಿನಿಂದ 80 ಮಂದಿ ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!