ವಿವೇಕಾನಂದ ಜಯಂತಿ ಪ್ರಯುಕ್ತ ಮಡಿಕೇರಿಯಲ್ಲಿ ಜಾಥ : ದೇಶಪ್ರೇಮ ಮೆರೆಯಲು ರವಿಕುಶಾಲಪ್ಪ ಕರೆ

January 10, 2021

ಮಡಿಕೇರಿ ಜ.10 : ಇಡೀ ವಿಶ್ವಕ್ಕೆ ಆದರ್ಶ ವ್ಯಕ್ತಿಯಾಗಿರುವ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಯುವ ಸಮೂಹ ದೇಶಭಕ್ತಿಯನ್ನು ಮೆರೆಯಬೇಕೆಂದು ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿಯ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಕರೆ ನೀಡಿದ್ದಾರೆ.
ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ಮಡಿಕೇರಿಯಲ್ಲಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರವಿಕುಶಾಲಪ್ಪ ಅವರು ಯುವ ಜನತೆ ದೇಶದ ಪ್ರಗತಿಯತ್ತ ಚಿಂತನೆ ಹರಿಸಬೇಕೆಂದು ಕಿವಿಮಾತು ಹೇಳಿದರು.
ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಚೆಂಗಪ್ಪ, ನಗರ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ವಿರಾಜಪೇಟೆ ಯುವ ಮೋರ್ಚಾ ಅಧ್ಯಕ್ಷ ಕವನ್, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಜಗದೀಶ್ ಬಿ.ಕೆ, ಪಕ್ಷದ ಪ್ರಮುಖ ಧನಂಜಯ ಮತ್ತಿತರರು ಪಾಲ್ಗೊಂಡಿದ್ದರು.
ನಗರದ ಶ್ರೀಚೌಡೇಶ್ವರಿ ದೇವಾಲಯದಿಂದ ಆರಂಭಗೊಂಡ ಜಾಥಾ ಗಾಂಧಿ ಮೈದಾನದಲ್ಲಿ ಸಮಾರೋಪಗೊಂಡಿತು.

error: Content is protected !!