ಕುಶಾಲನಗರದಲ್ಲಿ ಪುತ್ತರಿ ಊರೊರ್ಮೆ ಸಂತೋಷ ಕೂಟ

January 10, 2021

ಮಡಿಕೇರಿ ಜ.10 : ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಊರೊರ್ಮೆ ಸಂತೋಷಕೂಟ ಕಾರ್ಯಕ್ರಮ ನಡೆಯಿತು. ಸಮಾಜದ ಅಧ್ಯಕ್ಷರಾದ ಮಂಡೇಪಂಡ ಬೋಸ್ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ಮೊಳ್ಳೇರ ಪಿ ಗಣೇಶ್, ಉದ್ಯಮಿ ಮೂಡೆರ ಹೇಮಕುಮಾರ್ ಪಾಲ್ಗೊಂಡಿದ್ದರು. ಸಂತೋಷ ಕೂಟದಲ್ಲಿ ಸಮಾಜ ಬಾಂಧವರಿಂದ ಕೋಲಾಟ, ಉಮ್ಮತಾಟ್ ಪ್ರದರ್ಶನ ನಡೆಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ವಿತರಣೆ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾಜದ ಉಪಾಧ್ಯಕ್ಷ ಉಡುವೆರ ಹ್ಯಾರಿ ಚಿಟ್ಟಿಯಪ್ಪ, ಗೌರವ ಕಾರ್ಯದರ್ಶಿ ಸಂಜು ಬೆಳ್ಳಿಯಪ್ಪ ಸೇರಿದಂತೆ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

error: Content is protected !!