ಕೊಡಗಿನಲ್ಲಿ ಕೋವಿಡ್ : 5730 ಮಂದಿ ಗುಣಮುಖ

January 11, 2021

ಮಡಿಕೇರಿ ಜ. 11 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5880 ಆಗಿದ್ದು, 5730 ಮಂದಿ ಗುಣಮುಖರಾಗಿದ್ದಾರೆ. 70
ಸಕ್ರಿಯ ಪ್ರಕರಣಗಳಿದ್ದು, 80 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 49 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.