ಮಡಿಕೇರಿಯಲ್ಲಿ ಬಿಜೆಪಿಯಿಂದ ಜನಸೇವಕ ಸಮಾವೇಶ

January 11, 2021

ಮಡಿಕೇರಿ ಜ. 11 : ಜಿ.ಪಂ ಮತ್ತು ತಾ.ಪಂ ಚುನಾವಣೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಕ್ರಿಸ್ಟಲ್ ಹಾಲ್ ನಲ್ಲಿ ಜನಸೇವಕ ಸಮಾವೇಶ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ವಕ್ತಾರ ಅರವಿಂದ ಲಿಂಬಾವಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿಯ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ಪಕ್ಷದ ಜಿಲ್ಲಾ ವಕ್ತಾರ ಮಹೇಶ್ ಜೈನಿ ಮತ್ತಿತರ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

error: Content is protected !!