ಗೋವುಗಳ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು : ಮಡಿಕೇರಿಯಲ್ಲಿ ಸಚಿವ ಈಶ್ವರಪ್ಪ ಕಿಡಿ

January 11, 2021

ಮಡಿಕೇರಿ ಜ.11 : ಗೋವುಗಳ ಶಾಪದಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು, ಇದೇ ರೀತಿ ಹಿಂದುತ್ವದ ಬಗ್ಗೆ ಅಪಮಾನ ಮಾಡುತ್ತಲೇ ಇದ್ದರೆ ಮುಂದೆ ಕರ್ನಾಟಕದ ಯಾವುದೇ ಭಾಗದಲ್ಲಿ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲವೆಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ, ಹಿಂದುತ್ವವನ್ನು ಅಪಮಾನ ಮಾಡುತ್ತಾರೆ. ಇದರಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಂಡರು, ರಾಜ್ಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಳೆದುಕೊಂಡಿದ್ದಾರೆ. ಆಕಸ್ಮಿಕವಾಗಿ ಬಾದಾಮಿಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಕುರುಬ ಜನಾಂಗಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ಬಗ್ಗೆ ಸಿದ್ದರಾಮಯ್ಯ ಅವರು ಸುಳ್ಳಿನ ಮೇಲೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಈಶ್ವರಪ್ಪ, ಸುಳ್ಳಿನ ಸರದಾರ ಸಿದ್ದರಾಮಯ್ಯರಿಗೆ ನೋಬೆಲ್ ಪ್ರಶಸ್ತಿ ನೀಡಬೇಕೆಂದು ಟೀಕಿಸಿದರು.

error: Content is protected !!