ಮಡಿಕೇರಿಯಲ್ಲಿ ಜ.12 ರಂದು ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

11/01/2021

ಮಡಿಕೇರಿ ಜ.11 : ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ, ಬೆಂಗಳೂರು ಮತ್ತು ಕೊಡಗು ಜಿಲ್ಲಾ ಏಡ್ಸ್ ಕಂಟ್ರೋಲ್ ಯೂನಿಟ್, ಎನ್‍ಎಸ್‍ಎಸ್, ರೆಡ್ ರಿಬ್ಬನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವೈಆರ್‍ಸಿ ವತಿಯಿಂದ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವು ಜನವರಿ, 12 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವೈ.ಚಿತ್ರ, ಭಾಗಮಂಡಲ ಶ್ರೀ ಕಾವೇರಿ ಜೂನಿಯರ್ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಜೆ.ದಿವಾಕರ, ಜಿಲ್ಲಾ ಏಡ್ಸ್ ಕಂಟ್ರೋಲ್ ಅಧಿಕಾರಿ ಡಾ.ಆನಂದ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿ ಡಾ.ಕೆ.ಸಿ.ದಯಾನಂದ, ಎಚ್‍ಐವಿ ಏಡ್ಸ್ ಕಂಟ್ರೋಲ್ ಯೂನಿಟ್‍ನ ಜಿಲ್ಲಾ ಮೇಲ್ವಿಚಾರಕರಾದ ಸುನಿತಾ ಮುತ್ತಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.