ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 70

January 12, 2021

ಮಡಿಕೇರಿ ಜ. 12 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 9 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5889 ಆಗಿದ್ದು, 5739 ಮಂದಿ ಗುಣಮುಖರಾಗಿದ್ದಾರೆ. 70
ಸಕ್ರಿಯ ಪ್ರಕರಣಗಳಿದ್ದು, 80 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 50 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!