ಬೆಂಗಳೂರಿನಲ್ಲಿ ‘ಸ್ವಾಮಿ ವಿವೇಕಾನಂದ ಭವನ’ ಉದ್ಘಾಟನೆ

January 12, 2021

ಬೆಂಗಳೂರು ಜ. 12 : ಸ್ವಾಮಿ ವಿವೇಕಾನಂದರ 158ನೇ ಜನ್ಮದಿನಾಚರಣೆ ಪ್ರಯುಕ್ತ ರಾಜಭವನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಸ್ವಾಮಿ ವಿವೇಕಾನಂದ ಭವನ’ವನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಭವನದ ಪ್ರತಿಮೆ ಅನಾವರಣ ಹಾಗೂ ರಾಜಭವನದಿಂದ ಹೊರತಂದಿರುವ ಕರ್ನಾಟಕ ಕುರಿತ “A Visual Ode to Karnataka” ಪುಸ್ತಕ ಬಿಡುಗಡೆಯನ್ನು ನೆರವೇರಿಸಲಾಯಿತು.

ನಂತರ ಮುಖ್ಯಮಂತ್ರಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ – ಕರ್ನಾಟಕ ಕೇಂದ್ರ ಕಚೇರಿ ಆವರಣದಲ್ಲಿ ಬಿಬಿಎಂಪಿ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಉದ್ಘಾಟನೆ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

error: Content is protected !!