ಕುಶಾಲನಗರದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

January 12, 2021

ಮಡಿಕೇರಿ ಜ.12 : ಸ್ವಾಮಿ ವಿವೇಕಾನಂದರ ಜನ್ಮದಿನ ಅಂಗವಾಗಿ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕøತಿಕ ಸಮಿತಿ, ವಿದ್ಯಾರ್ಥಿ ಸಮಿತಿ, ಯುವ ರೆಡ್ ಕ್ರಾಸ್, ಸ್ಕೌಟ್ ಅಂಡ್ ಗೈಡ್ಸ್, ಎನ್‍ಎಸ್‍ಎಸ್ ಸಮಿತಿಗಳ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿಯ ಸಹಾಯಕ ಪ್ರಾಧ್ಯಾಪಕರಾದ ಬಿ.ಆರ್.ಶಶಿಧರ್ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಹೆಚ್.ಬಿ ಲಿಂಗಮೂರ್ತಿ ಮಾತನಾಡಿ, ಸ್ವಾಮಿ ವಿವೇಕಾನಂದರ ತತ್ತ್ವ ಸಿದ್ಧಾಂತಗಳು ಯುವಜನಾಂಗದ ಮೇಲೆ ಮಹತ್ತರವಾದ ಪರಿಣಾಮ ಬೀರಿದೆ ಎಂದರು.
ಉಪನ್ಯಾಸಕ ರಮೇಶ್‍ಚಂದ್ರ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಾಂಸ್ಕøತಿಕ ಸಮಿತಿ ಸಂಚಾಲಕರಾದ ವಸಂತಕುಮಾರಿ, ವಿದ್ಯಾರ್ಥಿ ಕ್ಷೇಮ ಪಾಲಕರಾದ ಕಾಶಿಕುಮಾರ್, ಡಾ.ಬಿ.ಡಿ.ಹರ್ಷ, ರೆಡ್ ಕ್ರಾಸ್ ಸಂಚಾಲಕರಾದ ರಶ್ಮಿ ಎನ್ನೆಸ್ಸೆಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

error: Content is protected !!