ಕೊಡಗಿನ ಎಲ್ಲಾ ಗ್ರಾ.ಪಂ. ಗಳಿಗೆ ರೂ. 1 ಕೋಟಿ ಅನುದಾನ : ಶಾಸಕ ಅಪ್ಪಚ್ಚು ರಂಜನ್

12/01/2021

ಮಡಿಕೇರಿ ಜ. 12 : ಕೊಡಗಿನ 101 ಗ್ರಾ.ಪಂ ಗಳಿಗೆ ತಲಾ 1 ಕೋಟಿ ರೂ.ಗಳ ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ದೇರಿಸಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ವಿವಿಧ ಗ್ರಾ.ಪಂ ಗಳಲ್ಲಿ 20 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ನೀಡುವ ವಿಶೇಷ ಅನುದಾನದಲ್ಲಿ ಗ್ರಾ.ಪಂ ಅಭಿವೃದ್ಧಿಗೂ ಆದ್ಯತೆ ನೀಡುವ ನಿಟ್ಟಿನಲ್ಲಿ ಸೋಮವಾರಪೇಟೆ ತಾಲೂಕಿನ 33 ಗ್ರಾಮಗಳ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಕೋವಿಡ್ ಕಾರಣದಿಂದಾಗಿ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇದ್ದು, ಕಳೆದ ಸಾಲಿನಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕೊಡಗಿಗೆ 546 ಕೋಟಿ ವಿಶೇಷ ಫ್ಯಾಕೇಜ್ ಘೋಷಿಸಿದ್ದು, ಈಗಾಗಲೇ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಮತ್ತೆ 100 ಕೋಟಿ ಬಿಡುಗಡೆಯಾಗಲಿದ್ದು, ಬಾಕಿ ಉಳಿದಿರುವ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಮಾಡಿ, ಜಿಲ್ಲೆಯಲ್ಲಿರುವ 101 ಪಂಚಾಯ್ತಿಗಳಿಗೆ ಒಂದುವರೆ ಕೋಟಿ ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದರು.
ಎಲ್ಲಾ ಕಡೆಗಳಲ್ಲಿ ಗುಣಮಟ್ಟದ ಕಾಮಗಾರಿ ಆಗಬೇಕು, ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಕೊಡಗು ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯರಾದ ಪುಟ್ಟರಾಜು, ಸರೋಜಮ್ಮ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು, ಕಾವೇರಿ ನೀರಾವರಿ ನಿಗಮದ ಅಭಿಯಂತರುಗಳಾದ ಪುನೀತ್, ಪುಟ್ಟಸ್ವಾಮಿ, ಅರುಣ್ ರಶೀದ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಮೋಹನ್ ಕುಮಾರ್ ಈ ಸಂದರ್ಭ ಪಾಲ್ಗೊಂಡಿದ್ದರು.