ಸೋಮವಾರಪೇಟೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

January 12, 2021

ಸೋಮವಾರಪೇಟೆ ಡಿ.12 : ಇಲ್ಲಿನ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಪಟ್ಟಣದ ವಿವೇಕಾನಂದ ಪ್ರತಿಮೆಗೆ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಪ್ರಮುಖರು ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಶಾಸಕರು, ವಿವೇಕಾನಂದರ ಪ್ರತಿಯೊಂದು ಮಾತುಗಳೂ ಸಹ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ. ಇವರ ಆದರ್ಶಗಳ ಪಾಲನೆಯೊಂದಿಗೆ ಯುವ ಜನಾಂಗ ದೇಶಕಾರ್ಯದಲ್ಲಿ ತೊಡಗಬೇಕು ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀಸದಾಶಿವ ಸ್ವಾಮೀಜಿ ಮಾತನಾಡಿ,ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ದೇಶಕ್ಕೆ ಶಕ್ತಿ ತುಂಬಲು ಸಾಧ್ಯ ಎಂಬುದನ್ನು ವಿವೇಕಾನಂದರು ನಂಬಿದ್ದರು. ಅಂತಹ ಶಿಕ್ಷಣದ ಅವಶ್ಯಕತೆ ಇಂದಿಗೂ ಸಮಾಜಕ್ಕಿದೆ ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ನಿಧನರಾದ ಬಿ.ಎಸ್. ಸದಾನಂದ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಮುಖ್ಯಾಧಿಕಾರಿ ನಾಚಪ್ಪ, ರೋಟರಿ ಸಂಸ್ಥೆ ಅಧ್ಯಕ್ಷ ಲಿಖಿತ್ ದಾಮೋಧರ್, ಜಯಂತ್ಯೋತ್ಸವ ಸಮಿತಿ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಬಿ.ಆರ್. ಮೃತ್ಯುಂಜಯ, ನೂತನ ಅಧ್ಯಕ್ಷ ಪಿ.ಕೆ. ರವಿ, ಉದ್ಯಮಿ ಕಾರ್ತಿಕ್ ಸದಾನಂದ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!