ಜ.18 ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ

January 13, 2021

ಮಡಿಕೇರಿ ಜ.12 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 122 ನೇ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಜನವರಿ, 18 ರಂದು ಬೆಳಗ್ಗೆ 11 ಗಂಟೆಯಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ವ್ಯಕ್ತಿತ್ವ ಮತ್ತು ರಕ್ಷಣಾ ಸೇವೆರ ಪ್ರಭುತ್ವ ಬಗ್ಗೆ ಪ್ರಬಂಧ ಮತ್ತು ಚಿತ್ರಕಲೆ (ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ ಭಾವಚಿತ್ರ) ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ (8 ರಿಂದ 10 ನೇ ತರಗತಿಯವರೆಗೆ) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.

error: Content is protected !!