ಸುದೀರ್ಘ ರಜೆಯಲ್ಲಿ ತೆರಳಿದ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌

14/01/2021

ಮಡಿಕೇರಿ ಜ. 14 : ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ವೈಯಕ್ತಿಕ ಕಾರಣಕ್ಕೆ ಸುದೀರ್ಘ ರಜೆಯ ಮೇಲೆ ತೆರಳುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ರಾತ್ರಿ ವಿವಿಧ ಇಲಾಖೆಯ ಅಧಿಕಾರಿಗಳು, ಅವರಿಗೆ ಬೀಳ್ಕೊಡುಗೆ ನೀಡಿದರು. ಗುರುವಾರದಿಂದಲೇ ಅವರು ರಜೆಯ ಮೇಲೆ ತೆರಳುತ್ತಿದ್ದಾರೆ. ಸದ್ಯಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಭನ್ವರ್‌ ಸಿಂಗ್‌ ಅವರು ಪ್ರಭಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಸುದೀರ್ಘ ರಜೆಯ ಮೇಲೆ ತೆರಳಲು ನಿಖರವಾದ ಕಾರಣ ಖಚಿತವಾಗಿಲ್ಲ. ಆದರೆ, ಅವರು ವಾಷಿಂಗ್ಟನ್‌ಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ವರ್ಷದಿಂದ ಕೊಡಗು ಜಿಲ್ಲಾಧಿಕಾರಿಯಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. 2019ರ ಜನವರಿಯಲ್ಲಿ ಜಿಲ್ಲಾಧಿಕಾರಿಯಾಗಿ ಕೊಡಗಿಗೆ ಬಂದಿದ್ದರು.