Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:44 AM Friday 22-October 2021

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ರಿಗೆ ಆತ್ಮೀಯ ಬೀಳ್ಕೊಡುಗೆ

14/01/2021

ಮಡಿಕೇರಿ ಜ. 14 : ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲಾಧಿಕಾರಿಯಾಗಿ ಉತ್ತಮ ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದ ಅನೀಸ್ ಕಣ್ಮಣಿ ಜಾಯ್ ಅವರು ಜ. 14ರಿಂದ ಸುದೀರ್ಘ ರಜೆಯಲ್ಲಿ ಅಮೆರಿಕಾಕ್ಕೆ ತೆರಳುತ್ತಿದ್ದು, ಈ ಹಿನ್ನೆಲೆ ಜಿಲ್ಲಾಡಳಿತದಿಂದ ಹೃದಯ ಸ್ಪರ್ಶಿಯಾಗಿ ಶುಭ ಆರೈಸಿ, ಅಭಿನಂದಿಸಲಾಯಿತು.

ನಗರದ ಜಿ.ಪಂ.ಭವನದಲ್ಲಿ ಫಲತಾಂಬೂಲ, ಶಾಲು ನೀಡಿ ಆತ್ಮೀಯವಾಗಿ ಜಿಲ್ಲಾಧಿಕಾರಿ ಅವರನ್ನು ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ದೊಡ್ಡ ಅನುಭವ ನೀಡಿತು. ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಸಿಇಒ ಹಾಗೂ ಬೀದರ್ ಜಿಲ್ಲೆಯಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯಕ್ಕಿಂತ ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ್ದು, ವಿಭಿನ್ನ ಹಾಗೂ ವಿಶಿಷ್ಟವಾಗಿತ್ತು ಎಂದು ವರ್ಣಿಸಿದರು.

ಕೊಡಗು ಜಿಲ್ಲೆಯಲ್ಲಿ ಇತರೆ ಜಿಲ್ಲೆಗಳಿಗಿಂತ ಸಮಸ್ಯೆಗಳು ಬೇರೆ ಇವೆ. ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಮಸ್ಸೂರಿಗಿಂತಲೂ ಕೊಡಗು ಜಿಲ್ಲೆ ವಿಭಿನ್ನ ಎಂದರು. ಕಳೆದ ಎರಡು ವರ್ಷದಲ್ಲಿ ಪ್ರಾಕೃತಿ ವಿಕೋಪ, ಕೋವಿಡ್ ನಿಯಂತ್ರಣ, ಲೋಕಸಭೆ ಮತ್ತು ಗ್ರಾ.ಪಂ.ಚುನಾವಣೆ ಜೊತೆಗೆ ಸ್ಥಳೀಯ ಮೂಲಸೌಕರ್ಯಕ್ಕೆ ಒತ್ತು ನೀಡುವಲ್ಲಿ ವಸತಿ, ಕಸವಿಲೇವಾರಿ, ವಸತಿ ಶಾಲೆ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳಿಗೆ ಸುಮಾರು ೨೭೪ ಎಕರೆ ಭೂಮಿ ಒದಗಿಸಿದ್ದು ತೃಪ್ತಿತಂದಿದೆ ಎಂದು ಜಿಲ್ಲಾಧಿಕಾರಿ ಅವರು ನುಡಿದರು.

ಜಿಲ್ಲಾಧಿಕಾರಿಯಾಗಿ ಬಂದ ನಂತರದ ಒಂದು ವರ್ಷದಲ್ಲಿ ರಜೆ ಪಡೆದಿದ್ದು ಕಡಿಮೆ, ಕೊಡಗು ಜಿಲ್ಲೆಯೇ ಜೀವನ ಮತ್ತು ಕೆಲಸವಾಗಿತ್ತು, ಎಲ್ಲರ ಸಹಕಾರದಿಂದ ಹಲವು ಕಾರ್ಯಗಳನ್ನು ನಿಭಾಯಿಸಲು ಸಹಾಯವಾಯಿತು ಎಂದರು. ‘ಕೊಡಗು ಜಿಲ್ಲೆ ಬಿಟ್ಟು ಹೋಗಲು ಮನಸ್ಸು ಬರುತ್ತಿಲ್ಲ, ಆದರೂ ತುಂಬಾ ಅಲೋಚನೆ ಮಾಡಿ ರಜೆಯಲ್ಲಿ ಅಮೆರಿಕಾಕ್ಕೆ ಕುಟುಂಬದ ಜತೆ ತೆರಳುತ್ತಿದ್ದೇನೆ’ ಎಂದು ಭಾವುಕರಾದರು.

ಕೊಡಗು ಜಿಲ್ಲೆಯಲ್ಲಿ ಪ್ರತಿಯೊಂದು ಇಲಾಖೆಯವರು ತಂಡವಾಗಿ ಕಾರ್ಯನಿರ್ವಹಿಸಿದ್ದರಿಂದ ಜಿಲ್ಲಾಡಳಿತಕ್ಕೆ ಮತ್ತು ವೈಯಕ್ತಿಕವಾಗಿಯೂ ಒಳ್ಳೆಯ ಹೆಸರು ಪಡೆಯಲು ಸಾಧ್ಯವಾಯಿತು ಎಂದರು. ಮುಂದಿನ ಜಿಲ್ಲಾಧಿಕಾರಿ ಅವರಿಗೂ ಸಹಕಾರ ನೀಡಿ ಎಂದು ಕೋರಿದರು.

ಅಭಿನಂದನಾ ಸಮಾರಂಭ ಮಾತನಾಡಿದ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಜಿಲ್ಲಾಧಿಕಾರಿ ಅವರು ತಂಡದ ನಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯಾವುದೇ ರೀತಿಯ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುತ್ತಿದ್ದರು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರು ಜಿಲ್ಲಾಧಿಕಾರಿ ಅವರು ಹೆಸರಿಗಷ್ಟೆ ಕಣ್ಮಣಿಯಾಗಿರಲಿಲ್ಲ, ಕೊಡಗಿನ ಕಣ್ಮಣಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ವರ್ಣಿಸಿದರು. ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು ಅತ್ಯಂತ ವಿಭಿನ್ನ, ಅವಿಸ್ಮರಣೀಯ ವ್ಯಕ್ತಿತ್ವ ಹಾಗೂ ತಾಯಿ ಹೃದಯ ಗುಣವನ್ನು ಜಿಲ್ಲಾಧಿಕಾರಿ ಅವರು ಹೊಂದಿದ್ದರು ಎಂದು ಬಣ್ಣಿಸಿದರು.

ಡಿಎಚ್ಒ ಡಾ.ಕೆ.ಮೋಹನ್ ಅವರು ಕೋವಿಡ್-೧೯ ನಿಯಂತ್ರಣಕ್ಕೆ ತುಂಬಾ ಶ್ರಮವಹಿಸಿದ್ದಾರೆ. ಅಧಿಕಾರಿಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸಹಕಾರ ನೀಡಿದ್ದಾರೆ ಎಂದರು.

ಪೌರಾಯುಕ್ತರಾದ ರಾಮದಾಸ್ ಮಾತನಾಡಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಲು ಒಂದು ಎಕರೆ ಉತ್ತಮ ಜಾಗ ಹಾಗೂ ಕಸ ವಿಲೇವಾರಿಗೆ ೧೦ ಎಕರೆ ಭೂಮಿ ನೀಡಿದ್ದು, ನಗರದ ಜನತೆ ಮರೆಯುವಂತಿಲ್ಲ ಎಂದು ವರ್ಣಿಸಿದರು.

ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಐಟಿಡಿಪಿ ಅಧಿಕಾರಿ ಶಿವಕುಮಾರ್, ಅಗ್ನಿಶಾಮಕ ಅಧಿಕಾರಿ ಚಂದನ್, ಡಿಡಿಪಿಐ ಮಚ್ಚಾಡೊ ಇತರರು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಕರ್ತವ್ಯ ನಿರ್ವಹಣೆ ಬಗ್ಗೆ ಗುಣಗಾನ ಮಾಡಿದರು. ಇದೇ ಸಂದರ್ಭದಲ್ಲಿ ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಹೊರತರಲಾಗಿರುವ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬಿಡುಗಡೆ ಮಾಡಿದರು.