ಆರ್ಜಿ ಗ್ರಾಮದ ಶ್ರೀ ಭಗವತಿ ಭದ್ರಕಾಳಿ ದೇವಾಲಯಕ್ಕೆ ತೆರಳುವ ಕಾಂಕ್ರಿಟ್ ರಸ್ತೆ ಉದ್ಘಾಟನೆ

January 14, 2021

ವಿರಾಜಪೇಟೆ ಜ. 14 : ಶಾಸಕರ ವಿಶೇಷ ಅನುದಾನ ರೂ. 3 ಲಕ್ಷ ವೆಚ್ಚದಲ್ಲಿ ಡಾಂಬರೀಕರಣಗೊಂಡ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ಶ್ರೀ ಭಗವತಿ ಭದ್ರಕಾಳಿ ದೇವಾಲಯಕ್ಕೆ ತೆರಳುವ ರಸ್ತೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಕಾಷ್ಟು ಕಷ್ಟ ನಷ್ಟಗಳು ಸಂಭವಿಸಿದ್ದು, ಕೋವಿಡ್‍ನಿಂದಾಗಿ ಅನುದಾನದ ಕೊರತೆ ಎದುರಾಗಿದ್ದು, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಆ ನಿಟ್ಟಿನಲ್ಲಿ ಶಾಸಕರ ಅನುದಾನದಿಂದ ರಸ್ತೆ ಮತ್ತು ಅಭಿವೃದ್ದಿಯೇತರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಪ್ರಸ್ತುತ ಸನ್ನಿವೇಶದಲ್ಲಿ ಗ್ರಾಮ ಅಭಿವೃದ್ದಿ ಕಾರ್ಯಗಳಿಗೆ ಅನುದಾನಗಳು ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನಗಳನ್ನು ಒದಗಿಸಿ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದೆಂದರು.

ಜಿ.ಪಂ. ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ, ಗ್ರಾಮಗಳ ರಸ್ತೆಗಳು ಮಳೆಯಿಂದಾಗಿ ದುಸ್ತಿತಿಗೆ ತಲುಪಿದೆ. ಶಾಸಕರು ಗ್ರಾಮಗಳ ರಸ್ತೆ ದುರಸ್ತಿಗಾಗಿ ವಿಶೇಷ ಅನುದಾನಗಳನ್ನು ಕಲ್ಪಿಸಿ, ವಿಶೇಷ ಕಾಳಜಿ ವಹಿಸಿದ್ದಾರೆ ಎಂದರು.

ರಸ್ತೆ ಉದ್ಘಾಟನೆ ಬಳಿಕ ಶ್ರೀ ಭಗವತಿ ದೇಗುಲಕ್ಕೆ ತೆರಳಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭ ಪ್ರಮುಖರಾದ ಮಲ್ಲಂಡ ಮಧು ದೇವಯ್ಯ, ಜಿ.ಪಂ ಸದಸ್ಯ ಶಶಿ ಸುಬ್ರಮಣಿ, ತಾ.ಪಂ ಸದಸ್ಯ ಬಿ.ಎಂ.ಗಣೇಶ್, ಪಟ್ರಪಂಡ ರಘು ನಾಣಯ್ಯ, ಆರ್ಜಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಮಣಿ, ಗ್ರಾಮ ಪಂಚಾಯಿತಿ ಸದಸ್ಯ ಕಬ್ಬಚೀರ ಬೋಪಣ್ಣ ಹಾಗೂ ಶ್ರೀ ಭಗವತಿ ಭದ್ರಕಾಳಿ ದೇಗುಲದ ಆಡಳಿತ ಮಂಡಳಿಯ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

error: Content is protected !!