ಕೇಂದ್ರ ಸರ್ಕಾರ ರೈತರನ್ನು ನಾಶಗೊಳಿಸಲು ಮುಂದಾಗಿದೆ: ರಾಹುಲ್ ಗಾಂಧಿ ವಾಗ್ದಾಳಿ

January 14, 2021

ಮಧುರೈ (ತಮಿಳುನಾಡು): ಕೊರೊನಾ ಕಾಲದಲ್ಲಿ ಜನಸಾಮಾನ್ಯರ ಪರವಾಗಿ ನಿಲ್ಲದ ಪ್ರಧಾನಿ ಮೋದಿ, ಇದೀಗ ರೈತರನ್ನು ನಾಶಗೊಳಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ರಾಜ್ಯದ ಮಧುರೈನ ಅವನಿಯಾಪುರಂನಲ್ಲಿ ಜಲ್ಲಿಕಟ್ಟು ವೀಕ್ಷಣೆಗೆ ಆಗಮಿಸಿದ್ದ ರಾಹುಲ್ ಗಾಂಧಿ, ಜಲ್ಲಿಕಟ್ಟು ವೀಕ್ಷಣೆ ಬಳಿಕ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ 3 ಕೃಷಿ ಕಾಯ್ದೆಗಳನ್ನು ಬಲವಂತವಾಗಿ ಹಿಂದಕ್ಕೆ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಹುಲ್ ವಿವರಿಸಿದರು.

ಕೃಷಿ ಕಾಯ್ದೆ ವಿಚಾರದಲ್ಲಿ ನಾನು ರೈತರ ಪರ ನಿಲ್ಲುತ್ತೇನೆ ಎಂದ ರಾಹುಲ್ ಗಾಂಧಿ, ರೈತರು ದುರ್ಬಲರಾದರೆ ಭಾರತ ದೇಶವೇ ದುರ್ಬಲವಾಗುತ್ತೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ, ಬದಲಾಗಿ ನಾಶ ಮಾಡಲು ಯತ್ನಿಸುತ್ತಿದೆ ಎಂದು ಹರಿಹಾಯ್ದರು. ತಮ್ಮ ಒಂದೆರಡು ಸ್ನೇಹಿತರನ್ನು ಮೆಚ್ಚಿಸುವ ಸಲುವಾಗಿ ರೈತರ ಹಿತಾಸಕ್ತಿಯನ್ನು ಕೇಂದ್ರ ಸರ್ಕಾರ ಬಲಿ ಕೊಡುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

error: Content is protected !!