ಕೊಡಗಿಗೆ ಬಂದಿದೆ 4 ಸಾವಿರ ಡೋಸ್ ಕೋವಿಡ್ ಲಸಿಕೆ

14/01/2021

ಮಡಿಕೇರಿ ಜ.14 : ಕೋರೋನಾ ವಿರುದ್ಧದ ಮತ್ತೊಂದು ಹಂತದ ಹೋರಾಟಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು, ಗುರುವಾರ ಜಿಲ್ಲೆಗೆ ನಾಲ್ಕು ಸಾವಿರ ಡೋಸ್ ಕೋವಿಡ್ ಲಸಿಕೆ ಆಗಮಿಸಿದೆ.
ಗುರುವಾರ ಮೈಸೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಬಳಿಯ ಲಸಿಕಾ ಉಗ್ರಾಣದಲ್ಲಿ ಕೊವಿನ್ ಲಸಿಕೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಡಾ.ಗೋಪಿನಾಥ್ ಇತರರು ಪಡೆದರು.
ಜಿಲ್ಲೆಗೆ ಗುರುವಾರ ಸಂಜೆ ಆಗಮಿಸಿದ ಲಸಿಕೆಯನ್ನು ಪ್ರಭಾರ ಜಿಲ್ಲಾಧಿಕಾರಿಗಳೂ ಆಗಿರುವ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಲಸಿಕೆ ಸ್ವೀಕರಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಡಾ.ಆನಂದ್ ಇತರರು ಇದ್ದರು.
ಜ.16ರಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಕೊಡಗು ಜಿಲ್ಲೆಗೆ ಪ್ರಸಕ್ತ ನಾಲ್ಕು ಸಾವಿರ ಡೋಸ್ ಲಸಿಕೆ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ತಿಳಿಸಿದ್ದಾರೆ.